ವಿಪಕ್ಷ ವಿರುದ್ಧ ಪ್ರಾಸಿಕ್ಯೂಷನ್‌; ರಾಜಭವನಕ್ಕೆ 'ಕೈ' ಚಲೋ

ವಿಪಕ್ಷ ವಿರುದ್ಧ ಪ್ರಾಸಿಕ್ಯೂಷನ್‌; ರಾಜಭವನಕ್ಕೆ 'ಕೈ' ಚಲೋ

ಬೆಂಗಳೂರು: ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಶನಿವಾರ 'ರಾಜಭವನ ಚಲೋ' ನಡೆಸಿತು.

    ಆ ಮೂಲಕ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಸಂದರ್ಭದಲ್ಲಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವು ರಾಜಭವನದ ವಿರುದ್ಧ ಮತ್ತೊಂದು ಸುತ್ತಿನ ಸಂಘರ್ಷ ನಡೆಸಿದೆ.

    ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಲು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ಕಾಂಗ್ರೆಸ್ ಪಕ್ಷದ ನಾಯಕರು ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು.

    ಅದಕ್ಕೂ ಮೊದಲು ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲ ಸಚಿವರು, ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

     ರಾಜ್ಯಪಾಲರಿಗೆ ಮನವಿ...

     ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ರಾಜಭವನದಲ್ಲಿ ಶನಿವಾರ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿತು.

      ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ