ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಅಮೆರಿಕ ವ್ಯಕ್ತಿ ಬಂಧನ

ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಅಮೆರಿಕ ವ್ಯಕ್ತಿ ಬಂಧನ

ವಾಷಿಂಗ್ಟನ್: ಲಾಸ್ ಏಂಜಲೀಸ್‌ನಿಂದ ಬೋಸ್ಟನ್‌ಗೆ ಪ್ರಯಾಣಿಸುತ್ತಿದ್ದ ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಪ್ರಯತ್ನಿಸಿದ್ದು, ಅದನ್ನು ತಡೆಯಲು ಹೋದ ಗಗನಸಖಿಯ ಕುತ್ತಿಗೆಗೆ ಇರಿಯಲು ಯತ್ನಿಸಿದ ಘಟನೆ ನಡೆದಿದೆ.

     ಘಟನೆಗೆ ಸಂಬಂಧಿಸಿದಂತೆ ಆರೋಪಿ ಲಿಯೋಮಿನ್‌ಸ್ಟರ್‌ನ ಟೊರೆಸ್(33) ಎಂಬಾತನನ್ನು ಬೋಸ್ಟನ್ ಲೋಗನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಹೇಳಿದೆ.

     ಫ್ರಾನ್ಸಿಸ್ಕೊ ಟೊರೆಸ್‌, ಅಪಾಯಕಾರಿ ಆಯುಧ ಬಳಸಿ ವಿಮಾನ ಸಿಬ್ಬಂದಿಯನ್ನು ಇರಿಯಲು ಯತ್ನಿಸಿದ್ದಾನೆ ಎಂದು ನ್ಯಾಯಾಂಗ ಇಲಾಖೆ ತಿಳಿಸಿದೆ.

      ಟೊರೆಸ್‌ನನ್ನು ಭಾನುವಾರ ಸಂಜೆ ಬೋಸ್ಟನ್ ಲೋಗನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾರ್ಚ್ 9 ರಂದು ಪ್ರಕರಣ ವಿಚಾರಣೆ ನಡೆಯಲಿದ್ದು, ಅಲ್ಲಿವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

      ಟೊರೆಸ್ ಲಾಸ್ ಏಂಜಲೀಸ್‌ನಿಂದ ಬೋಸ್ಟನ್‌ಗೆ ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಲ್ಯಾಂಡಿಂಗ್‌ಗೆ ಸುಮಾರು 45 ನಿಮಿಷಗಳ ಮೊದಲು, ವಿಮಾನ ಸಿಬ್ಬಂದಿಗೆ ಕಾಕ್‌ಪಿಟ್‌ನಲ್ಲಿ ಎಚ್ಚರಿಕೆಯ ಶಬ್ದ ಕೇಳಿಸಿತು, ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಯಿತು. ಬಳಿಕ ಬಾಗಿಲಿನ ಲಾಕ್ ಹ್ಯಾಂಡಲ್ ತೆರೆಯಲು ಪ್ರಯತ್ನಿಸಿರುವುದನ್ನು ಗಗನಸಖಿ ಗಮನಿಸಿದರು.

      ತಕ್ಷಣ ಈ ವಿಷಯವನ್ನು ಪೈಲೆಟ್‌ ಗಮನಕ್ಕೆ ತರಲಾಗಿದೆ. ಇದೇ ವೇಳೆ ಟೊರೆಸ್‌ ಈ ಕೃತ್ಯ ನಡೆಸಿರುವುದು ಗೊತ್ತಾಗಿ ವಿಮಾನ ಸಿಬ್ಬಂದಿ ಆತನನ್ನು ಪ್ರಶ್ನಿಸಲು ಹೋಗಿದ್ದಾರೆ. ಆಗ ಆತ ತನ್ನ ಬಳಿಯಿದ್ದ ಅಪಾಯಕಾರಿ ಸಾಧನದಿಂದ ಗಗನಸಖಿಗೆ ತಿವಿಯಲು ಯತ್ನಿಸಿದ್ದಾನೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ