ವೆಲ್'ನೆಸ್ ಹೆಲ್ಪ್'ಲೈನ್ ನಿಂದ ಕೋವಿಡ್ ವ್ಯಾಕ್ಸಿನ್ ಶಿಬಿರ

ವೆಲ್'ನೆಸ್ ಹೆಲ್ಪ್'ಲೈನ್ ನಿಂದ ಕೋವಿಡ್ ವ್ಯಾಕ್ಸಿನ್ ಶಿಬಿರ
republicday728
republicday468
republicday234

ಮಂಗಳೂರು: ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರವ ಮಂಗಳೂರಿನ ವೆಲ್'ನೆಸ್ ಹೆಲ್ಪ್ ಲೈನ್ ತಂಡವು 45 ವರ್ಷ ಮೇಲ್ಪಟ್ಟವರಿಗಾಗಿ ಕೋವಿಡ್ ವ್ಯಾಕ್ಸಿನ್ ಶಿಬಿರವನ್ನು ಏರ್ಪಡಿಸಿತು.

     ಮಂಗಳೂರಿನ ಅತ್ತಾವರದಲ್ಲಿ ಕಛೇರಿಯನ್ನು ಹೊಂದಿರುವ ವೆಲ್'ನೆಸ್  ಸೆಂಟರ್ ತನ್ನದೇ ಆದ ರೀತಿಯಲ್ಲಿ ಸಮಾಜಕ್ಕೆ ವಿವಿಧ ರೀತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ವಿಶೇಷವಾಗಿ ಬಡ ರೋಗಿಗಳಿಗೆ ವೈದ್ಯಕೀಯ ನೆರವು ನೀಡುವಲ್ಲಿ, ವಿಪತ್ತು ಕಾಲದಲ್ಲಿ ಸಮಾಜಕ್ಕೆ ಅಗತ್ಯವಿರುವ ಆಯಾ ಸಾಂದರ್ಭಿಕ ಸೇವೆಗಳನ್ನು ಒದಗಿಸುವಲ್ಲಿ ವೆಲ್'ನೆಸ್ ಮುಂಚೂಣಿಯಲ್ಲಿದೆ.
     ಕೋವಿಡ್ ಮಹಾಮಾರಿಯ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿದ್ದು, ಸರಕಾರವು ತನ್ನ ಕೋವಿಡ್ ಮಾರ್ಗಸೂಚಿಯಲ್ಲಿ 45 ವರ್ಷ ಮೇಲ್ಪಟ್ಟವರು ಕೊರೋನ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಈಗಾಗಲೇ ಆದೇಶಿಸಿದೆ. ಮೇ 1 ರಿಂದ 18 ವರ್ಷ ಮೇಲ್ಪಟ್ಟವರೂ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸೂಚಿಸಿದೆ. ಇದರ ಭಾಗವಾಗಿ ಕೋವಿಡ್ ದುರಂತ ಸಂದರ್ಭದಲ್ಲಿ ಉಚಿತ ಲಸಿಕಾ ಶಿಬಿರವನ್ನು ಏರ್ಪಡಿಸಿ ಜನರ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ.
      ಈ ಲಸಿಕಾ ಶಿಬಿರವನ್ನು ಬೆಂಬಲಿಸಿ ಅನೇಕ ಗಣ್ಯರು ಶಿಬಿರದಲ್ಲಿ ಭಾಗವಹಿಸಿ ಉಚಿತ ಲಸಿಕೆ ಹಾಕಿಸಿಕೊಂಡರು. ಇದೇ ಸಂದರ್ಭದಲ್ಲಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರೂ ಆಗಿರುವ ಮಾಜಿ ಮೇಯರ್ ಕೆ.ಅಶ್ರಫ್ ರವರು ಶಿಬಿರಕ್ಕೆ ಭೇಟಿ ಕೊಟ್ಟು ಉಚಿತ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಲಸಿಕಾ ಕಾರ್ಯವನ್ನು ಬೆಂಬಲಿಸಲು ಸಾರ್ವಜನಿಕರಿಗೆ ಪ್ರೇರಣೆಯಾದರು. ಲಸಿಕೆ ಹಾಕಿಸಿಕೊಂಡು ಮಾತನಾಡಿದ ಅವರು ಕೋವಿಡ್ ವ್ಯಾಕ್ಸಿನ್ ಹಾಕಿಸಿದರೆ ಮತ್ತೆ ಕೊರೋನ ಭಾದಿಸುವುದಿಲ್ಲ ಎಂದು ಹೇಳಲಾಗದು. ಆದರೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ಅಗತ್ಯ ಮಾತ್ರ ಬರುವುದಿಲ್ಲ. ಬದಲಾಗಿ ಮನೆಯಲ್ಲಿಯೇ ಕುಳಿತು ಚಿಕಿತ್ಸೆ ಪಡೆಯಬಹುದು. ಆದ್ದರಿಂದ 45 ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ