ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ: ಅಮಿತ್ ಶಾ

ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ: ಅಮಿತ್ ಶಾ

ನವದೆಹಲಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಸರ್ಕಾರ ಶೀಘ್ರದಲ್ಲೇ 'ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರ'ವನ್ನು ರೂಪಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

      ದೆಹಲಿಯಲ್ಲಿ ಇಂದು (ಗುರುವಾರ) ನಡೆದ ಭಯೋತ್ಪಾದನಾ ವಿರೋಧಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯ. ರಾಜ್ಯಗಳು ಭೌಗೋಳಿಕ ಗಡಿ ಮತ್ತು ಸಾಂವಿಧಾನಿಕ ಮಿತಿಗಳನ್ನು ಹೊಂದಿವೆ. ಆದರೆ, ಭಯೋತ್ಪಾದನೆಗೆ ಯಾವುದೇ ಗಡಿಯಿಲ್ಲ. ಹಾಗಾಗಿ ಕೇಂದ್ರ ಹಾಗೂ ರಾಜ್ಯದ ಭದ್ರತಾ ಏಜೆನ್ಸಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿ, ಜಂಟಿ ತಂತ್ರಗಾರಿಕೆ ಮಾಡಬೇಕು. ಗುಪ್ತಚರ ಮಾಹಿತಿ ಹಂಚಿಕೊಳ್ಳಬೇಕು ಎಂದು ಹೇಳಿದ್ದಾರೆ.

      ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾದರಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಯೋಜನೆ ರೂಪಿಸಿದೆ. ಒಂದು ವೇಳೆ ಇದು ಅಂಗೀಕರಿಸಿದರೆ, ಭಯೋತ್ಪಾದನೆಯ ಅಪಾಯವನ್ನು ನಿಭಾಯಿಸಲು ಸಾಮಾನ್ಯ ರಚನೆ ಮತ್ತು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.

      ಭಯೋತ್ಪಾದನೆ, ಭಯೋತ್ಪಾದಕರು ಮತ್ತು ಭಯೋತ್ಪಾದನಾ ಜಾಲದ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿಯೇ ನಾವು ಶೀಘ್ರದಲ್ಲೇ ಹೊಸ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರವನ್ನು ರೂಪಿಸಲಿದ್ದೇವೆ. ಇದರಲ್ಲಿ ನೀವೆಲ್ಲರೂ ಪ್ರಮುಖ ಪಾತ್ರವನ್ನು ವಹಿಸುತ್ತೀರಿ ಎಂದು ಅಮಿತ್‌ ಶಾ ಹೇಳಿದ್ದಾರೆ.

      ಸಮಾವೇಶದಲ್ಲಿ ರಾಜ್ಯ ಪೊಲೀಸ್ ಪಡೆಗಳ ಮುಖ್ಯಸ್ಥರು ಮತ್ತು ರಾಜ್ಯಗಳು ಮತ್ತು ಕೇಂದ್ರದ ಇತರ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ