ಶತಕದತ್ತ ಪೆಟ್ರೋಲ್ ದರ!

ಶತಕದತ್ತ ಪೆಟ್ರೋಲ್ ದರ!

ನವದೆಹಲಿ, ಜನವರಿ 13 : ದೇಶಾದ್ಯಂತ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿವೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಐದು ದಿನಗಳ ನಂತರ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. 
  ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ತಲಾ 25 ಪೈಸೆ ಏರಿಕೆಯಾಗಿದ್ದು. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 91.07 ರೂ ಗೆ ಏರಿಕೆಯಾಗಿದ್ದು, ಡೀಸೆಲ್ 81.34 ರೂ.ಗಳನ್ನು ತಲುಪಿದೆ. 

     ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.45ರೂ ಗೆ ಏರಿಕೆಯಾಗಿದ್ದು, ಡೀಸೆಲ್ ದರ 74.63 ರೂಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 85.92 ಮತ್ತು ಡೀಸೆಲ್ 78.22 ರೂ ಮತ್ತು ಚೆನ್ನೈನಲ್ಲಿ ಪೆಟ್ರೋಲ್ 87.18 ಮತ್ತು ಡೀಸೆಲ್ 79.95 ರೂ. ಗಳಷ್ಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಏರಿಕೆಯಾಗಿದ್ದು, ಆ ಮೂಲಕ ಪೆಟ್ರೋಲ್ ದರ 87.28ಕ್ಕೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್ ದರದಲ್ಲಿ ಕೂಡ 26 ಪೈಸೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 79.12 ರೂಗೆ ಏರಿಕೆಯಾಗಿದೆ. ತೈಲ ಬೆಲೆ ನಿಯಂತ್ರಣಕ್ಕೆ ಸಿಗದ ರೂಪದಲ್ಲಿ ಏರಿಕೆಯಾಗಿ ಜನಸಾಮಾನ್ಯರನ್ನು ಕಂಗೆಡಿಸಿದೆ.
 

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ