ಸಿಎಎ ವಿರೋಧಿ ಹೋರಾಟ: ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮಂಗಳವಾರ ಖುಲಾಸೆಗೊಳಿಸಿದೆ.

ಸಿಎಎ ವಿರೋಧಿ ಹೋರಾಟ: ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆ

ಅಸ್ಸಾಂ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮಂಗಳವಾರ ಖುಲಾಸೆಗೊಳಿಸಿದೆ.

      2019 ರಲ್ಲಿ ಅಸ್ಸಾಂನಲ್ಲಿ ನಡೆದ ಸಿಎಎ, ಎನ್.ಆರ್.ಸಿ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಗೊಗೋಯ್‌ ವಿರುದ್ದ‌ ಎರಡು ಪ್ರಕರಣಗಳು ದಾಖಲಾಗಿದ್ದವು. ಆದರೆ ಅವರು ಜೈಲಿನಲ್ಲಿದ್ದುಕೊಂಡೆ ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು.

      ಎನ್‌ಐಎ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದು, ಒಂದು ದಿಬ್ರುಗಡದ ಚಾಬುವಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ (ಯುಎಪಿಎ) ಯ ಹಲವಾರು ವಿಭಾಗಗಳ ಅಡಿಯಲ್ಲಿ ದಾಖಲಾಗಿತ್ತು. ಮತ್ತೊಂದು ಪ್ರಕರಣ ಗುವಾಹಟಿಯ ಚಾಂದಮರಿಯಲ್ಲಿ ದಾಖಲಾಗಿತ್ತು. ಪ್ರಸ್ತುತ ಚಾಬುವಾ ಪ್ರಕರಣವನ್ನು ಖುಲಾಸೆಗೊಳಿಸಲಾಗಿದ್ದು, ಚಾಂದಮರಿ ಪ್ರಕರಣ ಮುಂದುವರಿಯಲಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ