ಸತತ 5ನೇ ದಿನವೂ ಶೋಂಕಿತರ ಸಂಖ್ಯೆಯಲ್ಲಿ ಇಳಿಕೆ: ಅಲ್ಪ ನಿಟ್ಟುಸಿರು-ಕೇಂದ್ರ ಆರೋಗ್ಯ ಇಲಾಖೆ

ಸತತ 5ನೇ ದಿನವೂ ಶೋಂಕಿತರ ಸಂಖ್ಯೆಯಲ್ಲಿ ಇಳಿಕೆ: ಅಲ್ಪ ನಿಟ್ಟುಸಿರು-ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ದೇಶದಲ್ಲಿ ಸತತ 5 ದಿನಗಳಿಂದಲೂ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖ ಕಾಣುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ 3,29,942 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

      ಇದೇ ಅವಧಿಯಲ್ಲಿ 3,876 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದು, 3,56,082 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಅಂಕಿ ಅಂಶಗಳ ಪ್ರಕಾರ ಸೋಂಕಿತರಿಗಿಂತ ಆಸ್ಪತ್ರೆಗಳಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಸಂತಸದ ಸಂಗತಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

      ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ, ದೇಶದಲ್ಲಿ ಒಟ್ಟು 2,29,92,517 ಕೋವಿಡ್ ಸೋಂಕು ಪ್ರಕರಣಗಳು ದೃಢಗೊಂಡಿವೆ. ಹಾಗೆಯೇ ಒಟ್ಟು ಮೃತಪಟ್ಟವರ ಸಂಖ್ಯೆ 2,49,992ಕ್ಕೆ ಏರಿಕೆಯಾಗಿದೆ.

      ಪ್ರಸ್ತುತ ದೇಶದಲ್ಲಿ 37,15,221 ಪ್ರಕರಣಗಳು ಸಕ್ರಿಯವಾಗಿವೆ. ಇದು ಒಟ್ಟು ಪ್ರಕರಣಗಳ ಶೇಕಡಾ 15.53ರಷ್ಟಿದ್ದು, ಚೇತರಿಕೆ ಪ್ರಮಾಣವು ಶೇಕಡಾ 83.39ರಷ್ಟು ದಾಖಲಾಗಿದೆ.
      
      ಇಂದಿನವರೆಗೂ ದೇಶದಲ್ಲಿ 17.27 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ