ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈಗ 2.5 ರಿಂದ 4 ಲಕ್ಷ ಜನರಿಗೆ ಪ್ರತಿ ದಿನ‌ ನೀಡಲಾಗುತ್ತಿದ್ದು, 1.5 ಕೋಟಿ ಡೋಸ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ ಎಂದು ಹೇಳಿದರು.

      ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ 'ವ್ಯಾಕ್ಸಿನೇಟ್ ಇಂಡಿಯಾ' ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದರು.

      ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಾಜಭವನದಲ್ಲಿ ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಮೈ ಮರೆಯಬಾರದು. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

      ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ.ಸುಧಾಕರ್, ಮುನಿರತ್ನ, ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ