ಸುರತ್ಕಲ್: ಜಲೀಲ್ ಹತ್ಯಾ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಮಂಗಳೂರು: ಸುರತ್ಕಲ್ ಕೃಷ್ಣಾಪುರದ ಉದ್ಯಮಿ ಜಲೀಲ್‌ರವರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಠಾಣೆಗಳಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಬಜಪೆ, ಸುರತ್ಕಲ್, ಕಾವೂರು ಮತ್ತು ಪಣಂಬೂರು ಠಾಣೆಗಳ ವ್ಯಾಪ್ತಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ನೀಡಿದ್ದಾರೆ.
ಇಂದು ಬೆಳಗ್ಗೆ 6ರಿಂದ 27ರ ಬೆಳಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಈ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿರುವ ಕೈಗಾರಿಕೆ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಕಚೇರಿಗಳ ಕೆಲಸದ ಪಾಳಿಯನ್ನು ಸಂಜೆ 6 ಗಂಟೆಗೆ ಬದಲಾಯಿಸಲು ಕ್ರಮಕೈಗೊಳ್ಳಬೇಕು ಮತ್ತು 6ರ ನಂತರದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ನೌಕರರು ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಬಾರದು ಎಂದು ನಗರ ಪೊಲೀಸ್ ಆಯುಕ್ತರು ಸೂಚಿಸಿದರು.
ಡಿಸೆಂಬರ್ 25ರ ಭಾನುವಾರ ಬೆಳಗ್ಗೆ 10ರಿಂದ ಡಿಸೆಂಬರ್ 27ರ ಬೆಳಿಗ್ಗೆ 10ರವರೆಗೆ ನಾಲ್ಕು ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ಮಾಡದಂತೆ ಆದೇಶ ಹೊರಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ನಗರ ಪೊಲೀಸ್ ಆಯೋಗ ಮನವಿ ಮಾಡಿದೆ.
ಶನಿವಾರ ರಾತ್ರಿ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಕೃಷ್ಣಾಪುರದ ಜಲೀಲ್ ಅವರ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ನಡೆಸಿದ್ದಾರೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ