ಸಿಸಿಬಿ ವಿಚಾರಣೆಯಲ್ಲಿ ನಟಿ ರಾಧಿಕಾ.

ಸಿಸಿಬಿ ವಿಚಾರಣೆಯಲ್ಲಿ ನಟಿ ರಾಧಿಕಾ.

ಬೆಂಗಳೂರು,ಜ. 8::ರಾಜಕಾರಣಿ, ಸರ್ಕಾರಿ ನೌಕರರು ಸೇರಿದಂತೆ ಹಲವರಿಗೆ ಹಣ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯುವರಾಜ್​ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧಿತರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಪರಿಶೀಲಿಸಿದಾಗ ರಾಧಿಕಾ ಕುಮಾರಸ್ವಾಮಿ ಬ್ಯಾಂಕ್ ಅಕೌಂಟ್​ಗೆ ಹಣ ಹಾಕಿರುವುದು ಬೆಳಕಿಗೆ ಬಂದಿತ್ತು.

     ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಧಿಕಾ ಕುಮಾರಸ್ವಾಮಿ , ಸಿನಿಮಾ ನಿರ್ಮಾಣಕ್ಕಾಗಿ ಯುವರಾಜ್​​ನಿಂದ 15 ಲಕ್ಷ ಹಾಗೂ ಬೇರೆ ಖಾತೆಯಿಂದ 60 ಲಕ್ಷ ಹಣ ಬಂದಿರುವುದಾಗಿ ಹೇಳಿದ್ದಾರೆ. ರಾಧಿಕಾ ಹೇಳಿಕೆಯಲ್ಲಿ ಗೊಂದಲ ಮೂಡಿದ ಕಾರಣ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ   ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್  ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ