ಹರಿಯಾಣ:BJP ಪ್ರಣಾಳಿಕೆ ಬಿಡುಗಡೆ; ₹500ಕ್ಕೆ ಅಡುಗೆ ಅನಿಲ, 2 ಲಕ್ಷ ಉದ್ಯೋಗ ಭರವಸೆ

ಹರಿಯಾಣ:BJP ಪ್ರಣಾಳಿಕೆ ಬಿಡುಗಡೆ; ₹500ಕ್ಕೆ ಅಡುಗೆ ಅನಿಲ, 2 ಲಕ್ಷ ಉದ್ಯೋಗ ಭರವಸೆ

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷವು ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರೈತರು, ಮಹಿಳೆಯರು, ಯುವಕರಿಗೆ ಆದ್ಯತೆ ನೀಡುವ ಭರವಸೆ ನೀಡಿದೆ.

      ರೋಹ್ಟಕ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಹರಿಯಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

     ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 10 ಕೈಗಾರಿಕಾ ನಗರಗಳ ಸ್ಥಾಪನೆ, ಹರಿಯಾಣದ ಮೂಲದ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

      2 ಲಕ್ಷ ಸರ್ಕಾರಿ ಉದ್ಯೋಗ ಸೃಷ್ಟಿ, ಹರ್ ಘರ್ ಗೃಹಿಣಿ ಯೋಜನೆಯಡಿ ₹500ಕ್ಕೆ ಅಡುಗೆ ಅನಿಲ, ಕನಿಷ್ಠ ಬೆಂಬಲ ಬೆಲೆಯಲ್ಲಿ 24 ಬೆಳೆಗಳ ಖರೀದಿ, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 5 ಲಕ್ಷ ಮನೆಗಳ ನಿರ್ಮಾಣ, ಲಾಡೋ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹2,100 ಸಹಾಯಧನ ನೀಡುವುದಾಗಿಯೂ ಘೋಷಿಸಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ