1.5 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ​ ಮಾಡಲು ಯತ್ನಿಸಿದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

1.5 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ​ ಮಾಡಲು ಯತ್ನಿಸಿದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

ಕೊಚ್ಚಿ: 1.5 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

      ಶಫಿ ಬಂಧಿತ ಆರೋಪಿಯಾಗಿದ್ದಾನೆ. ಈತ ವಯನಾಡು ಮೂಲದವನಾಗಿದ್ದಾನೆ. ಬಂಧಿತ ಶಫಿಯಿಂದ 1487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

      ಬಹ್ರೇನ್ , ಕೋಯಿಕ್ಕೋಡ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿ ಚಿನ್ನ ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು, ಅಂಗಿಯ ತೋಳುಗಳಿಂದ ಮುಚ್ಚಿ ಗ್ರೀನ್ ಚಾನೆಲ್ ಮೂಲಕ ಆರೋಪಿ ಹಾದುಹೋಗುವ ಪ್ಲಾನ್ ಮಾಡಿದ್ದನು.

      ಆರೋಪಿಯು ತನ್ನ ಕೈಗಳಿಗೆ ಚಿನ್ನವನ್ನು ಸುತ್ತಿ ಅಂಗಿಯ ತೋಳಿನಿಂದ ಮುಚ್ಚಿಕೊಂಡಿದ್ದನು. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳಿಗಾಗಿ ವಿಚಾರಣೆ ನಡೆಸುತ್ತಿದ್ದಾರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ