ಉಪ್ಪಿನಂಗಡಿಯಲ್ಲಿ ಅಮಾಯಕರ ಮೇಲೆ ಪೋಲೀಸ್‌ ದೌರ್ಜನ್ಯ: ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

ಉಪ್ಪಿನಂಗಡಿಯಲ್ಲಿ ಅಮಾಯಕರ ಮೇಲೆ ಪೋಲೀಸ್‌ ದೌರ್ಜನ್ಯ: ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

ಮಂಗಳೂರು: ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತರ ಮೇಲೆ ಪೋಲೀಸರು ಅಮಾನವೀಯವಾಗಿ ನಡೆಸಿದ ಲಾಠಿ ಚಾರ್ಜನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಉಗ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್ ತಿಳಿಸಿದ್ದಾರೆ.

      ಇತ್ತೀಚೆಗೆ ಉಪ್ಪಿನಂಗಡಿ ಭಾಗದಲ್ಲಿ ಜರುಗಿದ ಸರಣಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿ, ಡಿಸೆಂಬರ್‌ 14 ಸೋಮವಾರದಂದು ಪಿಎಫ್‌‌ಐ ಕಾರ್ಯಕರ್ತರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸುದ್ದಿ ತಿಳಿದು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

     ಪೋಲೀಸರು ಪ್ರತಿಭಟನಾ ನಿರತರನ್ನು ಸಮಾಧಾನ ಪಡಿಸುವ ಬದಲು  ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪೋಲೀಸರ ಏಟಿನಿಂದ ನೂರಾರು ಕಾರ್ಯಕರ್ತರು ಗಂಭೀರ ಗಾಯಗೊಂಡಿದ್ದಾರೆ. ಪೋಲೀಸರ ಅಮಾನವೀಯ ದೌರ್ಜನ್ಯ ಖಂಡನೀಯ ಎಂದು ಅಶ್ರಫ್ ತಿಳಿಸಿದ್ದಾರೆ.

      ಪೋಲೀಸರು ಶಾಂತಿ ಕಾಪಾಡಲು ಪ್ರಯತ್ನಿಸುವ ಬದಲು ಪ್ರಚೋದನಾತ್ಮಕವಾಗಿ ವರ್ತಿಸಿದ್ದಾರೆ. ಪೋಲೀಸರ ಈ ಕೃತ್ಯದ ವಿರುದ್ಧ ಮುಸ್ಲಿಂ ಒಕ್ಕೂಟ ಕಾನೂನು ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ