ಕೇರಳ ಗಡಿ ತಲಪಾಡಿಯಲ್ಲಿ ಬಿಗುಗೊಂಡ ತಪಾಸಣೆ: ರಸ್ತೆ ತಡೆ ಪ್ರತಿಭಟನೆ

ಕೇರಳ ಗಡಿ ತಲಪಾಡಿಯಲ್ಲಿ ಬಿಗುಗೊಂಡ ತಪಾಸಣೆ: ರಸ್ತೆ ತಡೆ ಪ್ರತಿಭಟನೆ

ಮಂಗಳೂರು:  ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರಿಗೆ ಆರ್​ಟಿ-ಪಿಸಿಆರ್​ ಟೆಸ್ಟ್​ ಕಡ್ಡಾಯಗೊಳಿಸಿದ ನಂತರ ಗಡಿ ಪ್ರದೇಶ ತಲಪಾಡಿಯಲ್ಲಿ ತಪಾಸಣೆಯನ್ನು ಬಿಗುಗೊಳಿಸಲಾಗಿದೆ. ಪ್ರವೇಶ ನಿರ್ಬಂಧಕ್ಕೆ ವಿಧಿಸಿರುವ ಕರ್ನಾಟಕದ ನಿರ್ಧಾರಕ್ಕೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ತಲಪಾಡಿಯ ಗಡಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

      ಕೇರಳದ ಗಡಿ ಪ್ರದೇಶದಲ್ಲಿ ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಾಹನಗಳನ್ನು ಸುಮಾರು ಅರ್ಧ ಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

      ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಮೊದಲು ಆರ್​ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್​, ಕೊರೊನಾ ಲಸಿಕೆ ಸರ್ಟಿಫಿಕೇಟ್ ಅಥವಾ ಸ್ಥಳದಲ್ಲಿಯೇ ಆರ್​ಟಿ-ಪಿಸಿಆರ್ ಪರೀಕ್ಷೆ ನಡೆಸಿ, ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಪರೀಕ್ಷೆ ರದ್ದುಗೊಳಿಸಲಾಗಿದ್ದು, ಕೇವಲ ಕೇರಳದಿಂದ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿ​ ತರುವಂತೆ ತಿಳಿಸಲಾಗಿದೆ. ನೆಗೆಟಿವ್ ರಿಪೋರ್ಟ್​ ತಂದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ವಾಪಸ್​ ಪಡೆಯಬೇಕೆಂದು ಒತ್ತಾಯಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ