ಬೆಂಗಳೂರು: ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ - ತಾಯಿ ಮತ್ತು ಮಗು ಸಾವು

ಬೆಂಗಳೂರು: ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ - ತಾಯಿ ಮತ್ತು ಮಗು ಸಾವು

ಬೆಂಗಳೂರು, ಜ 10: ಬೆಂಗಳೂರಿನ ಹೆಚ್​ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

      ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.

      ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

      ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕಲ್ಯಾಣ್‌ನಗರದಿಂದ ಎಚ್‌ಆರ್‌ಬಿಆರ್‌ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಮೆಟ್ರೊ ರೈಲು ಪಿಲ್ಲರ್‌ ಕುಸಿದು ಬಿದ್ದಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ